Excise Suddi

ಮಾಹಿತಿ

ಹಳ್ಳಿ ಹಳ್ಳಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ: ಮುಂಜಾನೆಯಿಂದಲೇ ಸಿಗುತ್ತಿದೆ ಸಾರಾಯಿ, ಕಡಿವಾಣ ಹಾಕುವವರು ಯಾರು?

ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಳ್ಳಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಯಾವುದೇ ಹೆದರಿಕೆಯಿಲ್ಲದೆ ಎಗ್ಗಿಲ್ಲದೆ ಸಾಗುತ್ತಿದೆ. ಬೆಳಗಿನ ಜಾವ 6 ಗಂಟೆಯಿಂದ ಆರಂಭವಾಗಿ ತಡರಾತ್ರಿಯವರೆಗೂ ಸಣ್ಣಪುಟ್ಟ ಕಿರಾಣಿ ಅಂಗಡಿಗಳು, ಮಿಲಿಟರಿ ಹೋಟೆಲ್‌ಗಳು ಹಾಗೂ ಡಾಬಾಗಳಲ್ಲಿ ರಾಜಾರೋಷವಾಗಿ ಮದ್ಯ ಸರಬರಾಜಾಗುತ್ತಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರ ಜೀವನದೊಂದಿಗೆ ಆಟವಾಡಲಾಗುತ್ತಿದೆ. ​ಅಬಕಾರಿ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಕಣ್ಣೆದುರೇ ಈ ಅಕ್ರಮ ದಂಧೆ ನಡೆಯುತ್ತಿದ್ದರೂ, ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ….

Read More

ಮದ್ಯ ಪ್ರಿಯರಿಗೆ ಕಹಿ ಸುದ್ದಿ: ರಾಜ್ಯದಲ್ಲಿ ‘ಕೈ’ಗೆಟುಕದ ಮದ್ಯ; ಬಜೆಟ್ ಬೆನ್ನಲ್ಲೇ ಬೆಲೆ ಏರಿಕೆ ಬರೆ!

ಬೆಂಗಳೂರು: ದಿನಬಳಕೆ ವಸ್ತುಗಳು, ನೀರು ಮತ್ತು ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಈಗ ಮತ್ತೊಂದು ಶಾಕ್ ನೀಡಿದೆ. ಬಜೆಟ್‌ನಲ್ಲಿ ಘೋಷಿಸಿದಂತೆ ಆದಾಯ ಕ್ರೋಢೀಕರಣದ ಉದ್ದೇಶದಿಂದ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದು, ಮುಂದಿನ ವಾರದಿಂದಲೇ ಹೊಸ ದರಗಳು ಅನ್ವಯವಾಗಲಿವೆ.   ​ವಿಶೇಷವೆಂದರೆ, ಈ ಬಾರಿ ಐಷಾರಾಮಿ ಬ್ರ್ಯಾಂಡ್‌ಗಳಿಗಿಂತ ಹೆಚ್ಚಾಗಿ ಬಡ ಹಾಗೂ ಮಧ್ಯಮ ವರ್ಗದವರು ಬಳಸುವ ‘ಎಕಾನಮಿ’ ಮತ್ತು ‘ಲೋ ಪ್ರೈಸ್’ ಬ್ರ್ಯಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು…

Read More

Solverwp- WordPress Theme and Plugin