Skip to main content

Excise Suddi

ನಿಯಮ ಮೀರಿ ಬಾರ್‌ಗಳ ದರ್ಬಾರ್:ಬಾಗೇಪಲ್ಲಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಕುಡುಕರ ಹಾವಳಿ, ಸಾರ್ವಜನಿಕರ ಆಕ್ರೋಶ

Share News

ಕಾನೂನು ಕಿಸೆಗೆ ಹಾಕಿಕೊಂಡ ಬಾರ್ ಮಾಲೀಕರು: ಬಾಗೇಪಲ್ಲಿಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ಕಣ್ಣುಮುಚ್ಚಾಲೆ

 

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಅಬಕಾರಿ ಇಲಾಖೆಯ ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ,ಬಾರ್ ಅಂಡ್ ರೆಸ್ಟೋರೆಂಟ್‌ಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ.

 

ಸರ್ಕಾರ ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ,ಎಂದರೆ ಬೆಳಗಿನ ಜಾವ 5 ಗಂಟೆಗೇ ಬಾರ್‌ಗಳ ಬಾಗಿಲು ತೆರೆದು ಮದ್ಯ ಮಾರಾಟ ಮಾಡಲಾಗುತ್ತಿದ್ದು, ಪಟ್ಟಣದಲ್ಲಿ ಬಾರ್ ಮಾಲೀಕರದ್ದೇ ದರ್ಬಾರ್ ನಡೆದಂತಿದೆ.

 

ಪಟ್ಟಣದ ಪ್ರಮುಖ ಬಾರ್‌ಗಳಲ್ಲಿ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಬೆಳಿಗ್ಗೆಯೇ ಮದ್ಯ ಪೂರೈಸಲಾಗುತ್ತಿದೆ.

 

ಬೆಳಗಿನ ಜಾವವೇ ಮದ್ಯಪ್ರಿಯರು ಬಾರ್‌ಗಳ ಮುಂದೆ ಸಾಲು ನಿಲ್ಲುತ್ತಿದ್ದು,

ಈ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

 

ನಿಯಮಾನುಸಾರ ಬೆಳಿಗ್ಗೆ ನಿಗದಿತ ಸಮಯದ ನಂತರವಷ್ಟೇ ಬಾರ್‌ಗಳನ್ನು ತೆರೆಯಲು ಅವಕಾಶವಿದೆ.

ಆದರೆ ಬಾಗೇಪಲ್ಲಿಯಲ್ಲಿ ಪ್ರಭಾವಿ ಬಾರ್ ಮಾಲೀಕರು ಕಾನೂನನ್ನು ಕಿಸೆಗೆ ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದರೂ, ಸಂಬಂಧಪಟ್ಟ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ.

 

ಅಕ್ರಮ ಮದ್ಯ ಮಾರಾಟದ ಕುರಿತು ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ಇದ್ದರೂ ಸಹ ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಹಾಗೂ ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಂಡು, ನಿಯಮ ಉಲ್ಲಂಘಿಸಿರುವ ಬಾರ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಾರೆಯೇ ಎಂಬುದನ್ನು ಕಾಯ್ದು ನೋಡಬೇಕಿದೆ.

 

ವರದಿ: ಕೆ.ಮುತ್ತಕದಹಳ್ಳಿ ವೆಂಕಟಾಚಲಪತಿ ಪೊಲೀಸ್ ವಾರ್ತೆ ಚಿಕ್ಕಬಳ್ಳಾಪುರ

Leave a Reply

Your email address will not be published. Required fields are marked *

Solverwp- WordPress Theme and Plugin